ಶಿವಮೊಗ್ಗ: ಶಿವಮೊಗ್ಗದ ಅಶೋಕನಗರ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ, ಸಾರ್ವಜನಿಕ ಸಮಸ್ಯೆ ಆಲಿಸಿದ ಶಾಸಕರು
ಅಶೋಕನಗರ ಬಡಾವಣೆಗೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ ನೀಡಿ ಸ್ಥಳೀಯರೊಂದಿಗೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನೇರ ಸಂವಹನ ನಡೆಸಿದರು. ಭೇಟಿಯ ಸಂದರ್ಭದಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ತಕ್ಷಣವೇ ಸಂಬಂಧಿತ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಪರಿಹಾರ ಕಾರ್ಯಗಳನ್ನು ವಿಳಂಬವಿಲ್ಲದೆ ಕೈಗೊಳ್ಳುವಂತೆ ಸೂಚಿಸಿದರು. ಶಿವಮೊಗ್ಗ ನಗರದಲ್ಲಿ ಮೂಲಸೌಲಭ್ಯಗಳ ಸುಧಾರಣೆ, ಸುಗಮ ಸಂಚಾರ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗಿದೆ ಎಂದರು