ದಾವಣಗೆರೆ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಉದ್ದೇಶದಿಂದ 50ಕ್ಕೂ ಹೆಚ್ಚು ವಿವಿಧ ಕಾರ್ಯಕ್ರಮ ಆಯೋಜನೆ: ನಗರದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ 50ಕ್ಕೂ ಅಧಿಕ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ ಹೇಳಿದರು. ಅವರು ದಾವಣಗೆರೆ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಬೈಕ್ ರ್‍ಯಾಲಿ, ರಂಗೋಲಿ ಚಿತ್ರ ಇನ್ನೂ ಅನೇಕ ರೀತಿಯಲ್ಲಿ ಕಾರ್ಯಕ್ರಮಗಳ ಮತದಾನ ಜಾಗೃತಿ ಮೂಡಿಸಲಾಗಿದೆ. ಕಳೆದ ಬಾರಿ ದಾವಣಗೆರೆಯಲ್ಲಿ ಶೇ. 50 ರಷ್ಟು ಮತದಾನವಾಗಿತ್ತು ಎಂದರು. ದಾವಣಗೆರೆ ಜಿಲ್ಲೆ ಹಾಗೂ ಹರಪನಹಳ್ಳಿ ಸೇರಿ ಒಟ್ಟು ಎಂಟು ಕ್ಷೇತ್ರಗಳು ಒಳಗೊಂಡಂತೆ ಲೋಕಸಭಾ ಚುನಾವಣೆ ನಡೆಯಲಿದೆ ಎಂದರು.