ಚನ್ನಪಟ್ಟಣ: ಬಲವಂತದ ಭೂಸ್ವಾದೀನ ಕೈಬಿಡಿ. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ ಆಗ್ರಹ.
ಚನ್ನಪಟ್ಟಣ-- ಬಿಡದಿ ಬಾಗದ ರೈತರು ಬಲವಂತದ ಭೂಸ್ವಾದೀನ ಖಂಡಿಸಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ರೈತ ಸಂಘ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ ತಿಳಿಸಿದರು. ನಗರದ ರೈತ ಸಂಘದ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ಸರ್ಕಾರ ಬಿಡದಿ ಬಾಗದಲ್ಲಿ ಸುಮಾರು 12 ಸಾವಿರ ಎಕರೆ ಫಲವತ್ತಾದ ಕೃಷಿ ಜಮೀನನ್ನು ಗ್ರೇಟರ್ ಬೆಂಗಳೂರು ಯೋಜನೆಗೆ ಸರ್ಕಾರ ಬಲತ್ಕಾರದ ಭೂಸ್ವಾದೀನ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು.