ಕಲಬುರಗಿ : ಕಲಬುರಗಿ ನಗರದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಎಸಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿದ್ವಾಯಿ ಆಸ್ಪತ್ರೆ ಮುಖ್ಯಸ್ಥರಾದ ಡಾ ಗುರುರಾಜ್ ದೇಶಪಾಂಡೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.. ಈ ಬಗ್ಗೆ ಡಿಸೆಂಬರ್ 26 ರಂದು ಮಧ್ಯಾನ 1.30 ಕ್ಕೆ ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ನಗರದ ಬ್ರಹ್ಮಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಶಿಫ್ಟ್ ಮಾಡಲಾಗಿದ್ದ ಎರಡು ಎಸಿಗಳನ್ನ ವಾಪಾಸು ತರಿಸಿಕೊಳ್ಳಲಾಗಿದೆ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಡಾ ಗುರುರಾಜ್ ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ