ಮಳವಳ್ಳಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದ ಮಹಾಲಕ್ಷ್ಮಿ ಚಿತ್ರಮಂದಿರದ ಆವರಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಡೀ ಚಿತ್ರಮಂದಿರದ ಹೊರಭಾಗ ಡೆವಿಲ್ ಸಿನಿಮಾ ಹಾಗೂ ದರ್ಶನ್ ಅವರ ಬೃಹತ್ ಕಟೌಟ್, ಬ್ಯಾನರ್, ಪೋಸ್ಟರ್ ಗಳಿಂದ ತುಂಬಿ ಹೋಗಿದೆ. ಗುರುವಾರ ಬೆಳಿಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ಮುಗಿಬಿದ್ದಿದ್ದು ಇಡೀ ಚಿತ್ರಮಂದಿರ ಪ್ರೇಕ್ಷಕರಿಂದ ತುಂಬಿಹೋಗಿತ್ತು. ಬೆಳಿಗ್ಗೆ 11.30 ರ ಸುಮಾರಿಗೆ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು ದರ್ಶನ್ ಪರ ಜಯಘೋಷಗ ಳನ್ನು ಮೊಳಗಿಸಿದರಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.