ಸಿದ್ದಾಪುರ: ತಾಲೂಕಿನ ಹುಸೂರಿನ ಸರ್ಕಾರಿ ಶಾಲೆಯ 75ನೇ ವರ್ಷದ (ಅಮೃತ ಮಹೋತ್ಸವ) ಸಂಭ್ರಮಾಚರಣೆಯ ಅಂಗವಾಗಿ ಶಾಸಕ ಭೀಮಣ್ಣ ನಾಯ್ಕ ಅವರು ಇಂದು ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಗೆ ಭೇಟಿ ನೀಡಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡೆಸಿದರು. ಶಾಲೆಯು 75 ವರ್ಷಗಳನ್ನು ಪೂರೈಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.