ನರಸಿಂಹರಾಜಪುರ: ಗುಂಡಿ ರಸ್ತೆ ಸಂಚಾರ ಸಿಡಿದೆದ್ದು ರೋಡ್ಗೆ ಅಡ್ಡ ಕೂತು ಪ್ರತಿಭಟನೆ.! ಸರ್ಕಾರದ ವಿರುದ್ಧ ಬಿಜೆಪಿ ಕೆಂಡ.!
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಪೂರೈಸಿದ್ದರೂ ಕೂಡ ರಸ್ತೆ ಅಭಿವೃದ್ಧಿಗಳನ್ನು ಮಾಡಿದ ಹಿನ್ನೆಲೆಯಲ್ಲಿ ಗುಂಡಿ ಬಿದ್ದ ರಸ್ತೆಯಲ್ಲಿ ನಿತ್ಯ ಸಂಚಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೀಗ ಜನರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಮಂಡಲ ಬಿಜೆಪಿ ವತಿಯಿಂದ ಕಡಬಗೆರೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.