ಆನೇಕಲ್: ಪರಪ್ಪನ ಅಗ್ರಹಾರದಲ್ಲಿ ಶಾಸಕ ವಿನಯ್ ಕುಲಕರ್ಣಿ, ವೀರೆಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ
ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲು ಭೇಟಿ ಮುಗಿಸಿ ಹೊರಟಿದ್ದು, ಈ ವೇಳೆ ಜೈಲಿನಲ್ಲಿ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿ ಅವರನ್ನ ಭೇಟಿ ಮಾಡಿದ್ದಾರೆ. ಭೇಟಿ ನಡುವೆ ಪರಪ್ಪನ ಅಗ್ರಹಾರ ಜೈಲು ವೀಕ್ಷಣೆ ಮಾಡಿದ್ದು, ಜೈಲು ವೀಕ್ಷಣೆ ಬಳಿಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೈದಿಗಳಿಗೆ ರಾಜಾತಿಥ್ಯ ವಿಡಿಯೋ ವೈರಲ್ ಸಂಬಂಧಿಸಿದಂತೆ ಗರಂ ಆಗಿ ಜೈಲು ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.