ಹೊನ್ನಾವರ: ಗೇರುಸೊಪ್ಪ ಡ್ಯಾಮ್ ಮತ್ತು ಪೊಲೀಸ್ ಔಟ್ ಪೋಸ್ಟ್ ಗೆ ಪೊಲೀಸ್ ವರಿಷ್ಠಾಧಿಕಾರಿ ಭೇಟಿ
ಹೊನ್ನಾವರ : ಪೊಲೀಸ್ ಠಾಣಾ ವ್ಯಾಪ್ತಿಯ ಗೇರುಸೊಪ್ಪ ಡ್ಯಾಮ್ ಮತ್ತು ಪೊಲೀಸ್ ಔಟ್ ಪೋಸ್ಟ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ ಅವರು ಭಾನುವಾರ ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗೇರುಸೊಪ್ಪ ಡ್ಯಾಮ್ ಮತ್ತು ಪೊಲೀಸ್ ಔಟ್ ಪೋಸ್ಟ್ ನ್ನು ಪರಿಶೀಲಿಸಿ, ಹಾಜರಿದ್ದ ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.