ಕಾರವಾರ: ಬನವಾಸಿಯನ್ನು ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆ ಮಾಡಿ ನಗರದಲ್ಲಿ ಭೀಮ ಘರ್ಜನೆ ಸಂಘಟನೆ ಆಗ್ರಹ
ನಗರದ ಪತ್ರಿಕಾಭವನದಲ್ಲಿ ಮಂಗಳವಾರ 2.50ರ ಸುಮಾರು ಭೀಮ ಘರ್ಜನೆ ಸಂಘಟನೆಯ ಅಧ್ಯಕ್ಷ ಅರ್ಜುನ್ ಮಾತನಾಡಿ ಶಿರಸಿ ತಾಲ್ಲೂಕಿನ ಬನವಾಸಿ ಭಾಗವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆ ಮಾಡಿರುವ ಕ್ರಮ ಅವೈಜ್ಞಾನಿಕವಾಗಿದ್ದು, ಇದರಿಂದ ಈ ಭಾಗದ ದಲಿತ ಸಮುದಾಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. 2004ರ ಮೊದಲು ಬನವಾಸಿಯು ಶಿರಸಿ ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಬನವಾಸಿಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಮರು ಸೇರ್ಪಡೆ ಮಾಡಿ, ಈ ಕ್ಷೇತ್ರವನ್ನು ದಲಿತ ಸಮುದಾಯಕ್ಕೆ ಮೀಸಲು ಎಂದು ಘೋಷಿಸುವಂತೆ ಅವರು ಒತ್ತಾಯಿಸಿದರು.