ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ, 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿದ್ದೇವು.