ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿಯಲ್ಲಿ ಸರಳವಾಗಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಆಡಳಿತದ ವತಿಯಿಂದ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ತಾಲೂಕು ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.