ಹುಬ್ಬಳ್ಳಿ ನಗರ: ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೋಗುವ ಹಿನ್ನಲೆ ಆಂಬುಲೆನ್ಸ್ ತಡೆದು ನಿಲ್ಲಿಸಿದ ಟ್ರಾಫಿಕ್ ಪೊಲೀಸರು ವಿಡಿಯೋ ವೈರಲ್
ಹುಬ್ಬಳ್ಳಿಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಹೋಗುತ್ತಿರುವ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಟ್ರಾಫಿಕ್ ಪೊಲೀಸರು ತಡೆದಿದ್ದು ವಿಡಿಯೋ ರವಿವಾರ 2:00 ಸುಮಾರಿಗೆ ವೈರಲ್ ಆಗಿದ್ದು ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.  ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಗೋಕುಲ ರಸ್ತೆ ಮಾರ್ಗವಾಗಿ ಹೋಗುತ್ತಿರುವಾಗ ಹೊಸೂರು ಸರ್ಕಲ್ ಬಳಿ  ಸಿಎಂ ಭದ್ರತೆ ಆಂಬುಲೆನ್ಸ್ ವಾಹನವನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿದ್ದು ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಹಿಂದೆ ಸಿಎಂ  ಧಾರವಾಡದಿಂದ ಹುಬ್ಬಳ್ಳಿಗೆ ಬರುವ ಸಂದರ್ಭದಲ್ಲಿ ತಾವೇ ಸ್ವತಃ ಆಂಬುಲೆನ್ಸ್ ಬರುತ್ತಿರುವುದನ್ನು ಗಮನಿಸಿ ಎಸ್ಕಾರ್ಟ್ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಆಂಬುಲೆನ್ಸ್ ಗೆ ಹೋಗಲು ಅನುಕೂಲ ಮಾಡಿಕೊಟ್ಟಿರೋದನ್ನ  ಇಲ್ಲಿ ಸ್ಮರಿಸಬಹುದಾಗಿದೆ.