ಕಾರವಾರ ಜಿಲ್ಲೆಯ ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿಷ್ಕಾಳಜಿ ವಹಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಬಂಡಿವಡ್ಡರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಕದ್ರಾದ ರಿಶೇಲ್ ಡಿಸೋಜಾ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.