ಗುರುಮಿಟ್ಕಲ್: ಮಹಾಮಳೆಗೆ ಕೋಟಗೇರಾ ಗ್ರಾಮದ ಬಳಿ ಸೇತುವೆ ಮುಳುಗಡೆ,ನೀರಿನಲ್ಲಿ ಕೊಚ್ಚಿಕೊಂಡು ಹೋದ ಜಾನುವಾರುಗಳು
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯ ಸುರಿಯುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೋಟಗೇರಾ ಗ್ರಾಮದ ಮುಖ್ಯರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದ್ದು ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಭಾನುವಾರ ಬೆಳಗ್ಗೆ ಸೇತುವೆ ಮೇಲೆ ಜಾನುವಾರುಗಳು ಹೋಗಿದ್ದರಿಂದ ನೀರಿನ ರಭಸಕ್ಕೆ ಎರಡು ಜಾನುವಾರುಗಳು ಕೊಚ್ಚಿಕೊಂಡು ಹೋಗಿರುವ ಘಟನೆಯೂ ನಡೆದಿದೆ. ಕಣ್ಣು ಮುಂದೆ ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದು ಕಂಡಿರುವ ಸಾರ್ವಜನಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.