ಮೈಸೂರು– ಬೆಳಗಾವಿ ಎಕ್ಸ್ಪ್ರೆಸ್ ರೈಲಿನಲ್ಲಿ (17301) ₹65 ಸಾವಿರ ಬೆಲೆ ಬಾಳುವ ಆಭರಣ, ವಸ್ತುಗಳಿದ್ದ ಮಹಿಳೆಯೊಬ್ಬರ ವ್ಯಾನಿಟ್ ಬ್ಯಾಗ್ ಕಳ್ಳತನವಾದ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರು– ಬೆಳಗಾವಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬೆಳಗಾವಿಯ ಅಲಕಾ ಪ್ರಕಾಶ ಕುಲಕರ್ಣಿ ಎಂಬುವರು, ರಾತ್ರಿ ವೇಳೆ ಸೀಟಿನಲ್ಲಿ ಮಲಗಿದ್ದರು. ಈ ವೇಳೆ ಅಪರಿಚಿತರು ವ್ಯಾನಿಟಿ ಬ್ಯಾಗ್ ಕದ್ದೊಯ್ದಿದ್ದಾರೆ. ₹40 ಸಾವಿರ ನಗದು, ₹25 ಸಾವಿರ ಮೌಲ್ಯದ ಮೊಬೈಲ್ ಫೋನ್ ಸೇರಿದಂತೆ ₹66,700 ಮೌಲ್ಯದ ವಸ್ತುಗಳ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.