ಶಿರಸಿ: ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ ನಗರ ಪೊಲೀಸರಿಂದ ಪಂಡಿತ ಸರಕಾರಿ ಆಸ್ಪತ್ರೆಯಲ್ಲಿ ರಕ್ತ ದಾನ
ಶಿರಸಿ ತಾಲೂಕಿನ ಪಂಡಿತ ಸರಕಾರಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ ಶಿರಸಿ ಪೊಲೀಸರಿಂದ ಶನಿವಾರ ಮಧ್ಯಾಹ್ನ 12ಕ್ಕೆ ರಕ್ತದಾನ ಮಾಡಲಾಯಿತು. ಶಿರಸಿ ನಗರ ಪೊಲೀಸ್ ಹಾಗೂ ಪಂಡಿತ್ ಸರ್ಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಶಿರಶಿ ನಗರ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ರಕ್ತದಾನವನ್ನು ಮಾಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಗೀತಾ ಪಾಟೀಲ್ ನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗಪ್ಪ ಬಿ ಇದ್ದರು.