ಬಳ್ಳಾರಿ-ಬೆಂಗಳೂರು ರಸ್ತೆಯಲ್ಲಿರುವ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿರುವ ಒಂದು ಗೋಡಾನ್ ನಲ್ಲಿ ಕೆಲವು ಜನರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಶೇಖರಣೆ ಮಾಡಿ ಇಟ್ಟಿರುತ್ತಾರೆಂದು ಖಚಿತ ಮಾಹಿತಿ ಬಂದ ಮೇರೆಗೆಆಹಾರ ಇಲಾಖೆ ಅಧಿಕಾರಿಗಳು ಹಾಗೂ ಎಪಿಎಂಸಿ ಪೊಲೀಸ್ ಠಾಣೆ ಪೋಲಿಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 284 ಚೀಲ 142 ಕ್ವಿoಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ ರಾತ್ರಿ 9:15ಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.