ನಗರದ ವಿವಿಧ ಬೀದಿಬದಿ ವ್ಯಾಪಾರ ಮಾಡುವ ವ್ಯಾಪಾರಿಗಳ ಮೇಲೆ ಅಧಿಕಾರಿಗಳು ದೌರ್ಜನ್ಯ ಮಾಡುತ್ತಿರುವ ಬಗ್ಗೆ ಆರೋಪಗಳಿದ್ದು ಅಂಥವರ ವಿರುದ್ಧ ಕೋರ್ಟ್ ಮೊರೆ ಹೋಗಲಾಗುವುದು ಎಂದು ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ರಾಜ್ಯ ಸಂಘದ ಅಧ್ಯಕ್ಷ ಸಿ. ಇ.ರಂಗಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಧ್ಯಾಹ್ನ 2ರ ಸುಮಾರು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕಾನೂನು ಇದೆ. ಅಧಿಕಾರಿಗಳು ಕ್ರಮ ಕೈಗೊಳ್ಳುವುದಿದ್ದರೆ ಆ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಲಿ ಎಂದರು.