ದಾಂಡೇಲಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಗರದ ಬಂಗೂರ ನಗರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ. ಎಲ್. ಗುಂಡೂರ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ಸಂಜೆ 5.30 ಗಂಡೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಕವಿವಿ ಕುಲಪತಿಗಳ ಆದೇಶದಂತೆ ಕುಲಸಚಿವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ನಗರದ ಬಂಗೂರ ನಗರ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾಗಿ, ಸಹ ಪ್ರಾಧ್ಯಾಪಕರಾಗಿ ಕಳೆದ ವರ್ಷದಿಂದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಬಿ. ಎಲ್. ಗುಂಡೂರವರು ಆಡಳಿತಾತ್ಮಕವಾಗಿ ಉತ್ತಮ ಹೆಸರು ಮಾಡಿದವರು.