ಪಾದಾಚಾರಿಗಳ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿ ವೃದ್ಧರು ಸೇರಿ 7 ಮಂದಿ ಗಾಯಗೊಂಡ ಘಟನೆ ಪಟ್ಟಣದಲ್ಲಿ ಭಾನುವಾರ ನಡೆದಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಯಳಂದೂರು ಪಟ್ಟಣದ ಚೌಡಮ್ಮ, ವೈ.ಕೆ.ಮೋಳೆ ಗ್ರಾಮದ ಲಕ್ಷ್ಮಮ್ಮ, ಕೆ.ದೇವರಹಳ್ಳಿ ಗ್ರಾಮದ ರತ್ನಮ್ಮ ಸೇರಿದಂತೆ 7 ಮಂದಿ ಕೈ- ಕಾಲುಗಳಿಗೆ ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್ ಗಾಗಿ ನಿಂತಿದ್ದವರಿಗೆ ಹಾಗೂ ಪಾದಾಚಾರಿಗಳ ಮೇಲೆ ಎಗರಿಬಿದ್ದ ನಾಯಿ ಕಂಡಕಂಡವರ ಮೇಲೆ ದಾಳಿ ಮಾಡಿ ಪರಾರಿಯಾಗಿದೆ. ಗಾಯಗೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.