ಕಮಲನಗರ: ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿ ಜೂಜು ₹23,500ಜಪ್ತಿ, 7ಜನ ಆರೋಪಿತರ ವಿರುದ್ಧ ಕಾನೂನು ಕ್ರಮ
ಪಟ್ಟಣದ ಸಾರ್ವಜನಿಕ ಸ್ಥಳ ಒಂದರಲ್ಲಿ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ 7ಜನ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದ ಮೇರೆಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಕಮಲಗರ್ ಪಿಎಸ್ಐ ಆಶಾ ರಾಠೋಡ್ ಹಾಗೂ ಸಿಬ್ಬಂದಿ ಸೇರಿ ಬಂಧಿತರಿಂದ ₹23,500ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ಧ ಕಮಲಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಛೇರಿ ಪ್ರಕಟಣೆಯಲ್ಲಿ ಮಂಗಳವಾರ ಮಧ್ಯಾನ್ಹ 12: 15ಕ್ಕೆ ತಿಳಿಸಲಾಗಿದೆ.