ಸತೀಶ್ ಜಾರಕಿಹೊಳಿ ಬಗ್ಗೆ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪರಮೇಶ್ವರ್ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ? ಹಿಂದೆ ಅವರು ಅಹಿಂದ ಚಳುವಳಿಯಲ್ಲಿದ್ರಿ, ಅವರಿಗೆ ಆ ಬದ್ಧತೆ ಇದೆ ಅಂತ ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದರು