ಮೊಳಕಾಲ್ಮುರು: ಪಟ್ಟಣದ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿದ್ದ ಸವಾರರಿಗೆ ಬಿಸಿಮುಟ್ಟಿಸಿದ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ
ಮೊಳಕಾಲ್ಮುರು:-ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿದ್ದ ಸವಾರರಿಗೆ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಬಿಸಿಮುಟ್ಟಿಸಿದ್ದಾರೆ. ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿನಿತ್ಯವೂ ಸಂಚರಿಸುವ ಬಸ್ ಗಳಿಗೆ ಸೂಕ್ತ ಜಾಗ ನೀಡದೆ ಬೈಕ್ ಸೇರಿದಂತೆ ಇನ್ನಿತರ ವಾಹನಗಳು ನೋ ಪಾರ್ಕಿಂಗ್ ಜಾಗದಲ್ಲಿ ಅಡ್ಡದಿಡ್ಡಿಯಾಗಿ ನಿಲ್ಲಿಸುತ್ತಿದ್ದರು, ಇದನ್ನು ಮನಗಂಡ ಪಿಎಸ್ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಸೋಮವಾರ ಮಧ್ಯಾಹ್ನ 12:30ಕ್ಕೆ ಸ್ಥಳಕ್ಕೆ ಧಾವಿಸಿ ನೋ ಪಾರ್ಕಿಂಗ್ ಸ್ಥಳದಲ್ಲಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಅಷ್ಟೇ ಅಲ್ಲದೆ ಯಾವುದೇ ಕಾರಣಕ್ಕೂ ಇಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ ಎಂದು ಎಚ್ಚರಿಸಿದ್ದಾರೆ.