ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದ ಶಾಸಕರಾದ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪಾರಸ್ಥರೊಂದಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸಭೆ ನಡೆಸಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ,ಕುಡಿಯುವ ನೀರು ಸರಬರಾಜು, ಇ ಸ್ವತ್ತು ಹಾಗೂ ಸ್ವಚ್ಛತಾ ನಿರ್ವಹಣೆಯ ಸಮಸ್ಯೆಗಳ ಕುರಿತು ಆಲಿಸಿ,ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳಾದ ಕೆ.ಎಚ್.ಗುರುಪ್ರಸಾದ, ಪಾಲಿಕೆಯ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಪ್ರಮುಖರಾದ ಚನ್ನು ಹೊಸಮನಿ, ರಾಜಕಿರಣ ಮೆಣಸಿನಕಾಯಿ ಹಾಗೂ ಇತರರು ಉಪಸ್ಥಿತರಿದ್ದರು.