ಅಂಕೋಲ: ಹಾರವಾಡದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿ ಹೊಡೆದ ಅಡುಗೆ ಎಣ್ಣೆ ಸಾಗಾಟ ಮಾಡುವ ಲಾರಿ: ಚಾಲಕ-ಕ್ಲೀನರ್ಗೆ ಗಾಯ
ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿ ಹೊಡೆದ ಘಟನೆ ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದ ಬಳಿ ರವಿವಾರ ಬೆಳಗ್ಗೆ 5ಕ್ಕೆ ಸಂಭವಿಸಿದರುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.ಹುಬ್ಬಳ್ಳಿಯಿಂದ ಗೋವಾಕ್ಕೆ ಅಡುಗೆ ಎಣ್ಣೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಅಡುಗೆ ಎಣ್ಣೆ ಪ್ಯಾಕೇಟ್ಗಳು ಮತ್ತು ಕ್ಯಾನ್ಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಅಪಘಾತದಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.