ಮಳವಳ್ಳಿ : ತಾಲ್ಲೂಕಿನ ಮಲ್ಲಿ ಕ್ಯಾತನಹಳ್ಳಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಪಟ್ಟಣದ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ದರು. ಸೋಮವಾರ ಸಾಯಂಕಾಲ 4.30 ರ ಸಮಯದಲ್ಲಿ ತಾಲ್ಲೂಕು ಕಚೇರಿ ಮುಂದೆ ನೆರೆದು ಪ್ರತಿಭಟನೆ ನಡೆಸಿದ ಸಂಘದ ಕಾರ್ಯ ಕರ್ತರು ಹಾಗೂ ಗ್ರಾಮಸ್ಥರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾ ಡಿದ ಪ್ರಾಂತ ರೈತ ಸಂಘದ ಅಧ್ಯಕ್ಷ ಭರತ್ ರಾಜ್ ಅವರು ಕಾವೇರಿ ಸೇರಿ ಹಲವು ನದಿಗಳು ಸುತ್ತುವರಿದಿದ್ದರು ಮಲ್ಲಿಕ್ಯಾತನಹಳ್ಳಿ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಇಲ್ಲದಿರುವುದು ದುರಂತ ಎಂದರು.