ಶಿರಸಿ: ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ಸೇವೆಯನ್ನು ಒದಗಿಸುವಂತೆ ಆಗ್ರಹಿಸಿ ಬನವಾಸಿಯ ಭಾಶಿ ಗ್ರಾಮದಲ್ಲಿ ಪ್ರತಿಭಟನೆ
ಶಿರಸಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರಿಯಾದ ಸಮಯಕ್ಕೆ ಬಸ್ ಸೇವೆ ಕಲ್ಪಿಸಬೇಕೆಂದು ಆಗ್ರಹಿಸಿ ಬನವಾಸಿ ಸಮೀಪದ ಭಾಶಿ ಗ್ರಾಮದಲ್ಲಿ ಸ್ಥಳೀಯ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ಮಂಗಳವಾರ 9 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಗಜಾನನ ಗೌಡ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಬೆನ್ನೂರುನಿಂದ ಮೊಗವಳ್ಳಿ, ಭಾಶಿ ಮಾರ್ಗವಾಗಿ ಬೆಳಗ್ಗೆ 9-30ಕ್ಕೆ ಬನವಾಸಿಗೆ ಸಂಚರಿಸುವ ಸರ್ಕಾರಿ ಬಸ್ ಕಳೆದ ಎರಡು ತಿಂಗಳಿನಿಂದ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದಾಗಿ ಪ್ರತಿಯೊಬ್ಬರಿಗೂ ತೊಂದರೆಯಾಗುತ್ತಿದೆ ಎಂದರು.