ಹುಬ್ಬಳ್ಳಿ: ಹುಢಾ ಶೇ. 95 ರೈತಾಪಿ ವರ್ಗ ಹಾಗೂ ಕೂಲಿ ಕಾರ್ಮಿಕರು ಇರುವ 46 ಗ್ರಾಮಗಳನ್ನು ತನ್ನ ವ್ಯಾಪ್ತಿಗೆ ಸೇರಿಸಿಕೊಂಡಿದ್ದು ಖಂಡನೀಯ, ಗ್ರಾಪಂ ಕರವನ್ನು ತುಂಬಲಾರದಷ್ಟು ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರು, ಕೂಲಿ ಕಾರ್ಮಿಕರು ಇದ್ದಾರೆ. ಅವರಿಗೆ ವ್ಯವಸಾಯ ಬಿಟ್ಟು ಬೇರೆ ಯಾವುದೇ ಉದ್ಯೋಗ ಗೊತ್ತಿಲ್ಲ, ಭೂಮಿ ತಾಯಿಯನ್ನು ನಂಬಿ ವ್ಯವಸಾಯ ಮಾಡುತ್ತಿದ್ದಾರೆ. ಅತಿವೃಷ್ಠಿ, ಅನಾವೃಷ್ಠಿಯಿಂದ ರೈತ ಕಂಗಾಲಾಗಿದ್ದಾನೆ. ತಾನು ಬೆಳೆದ ಬೆಳೆಗಳಿಗೆ ಸರಿಯಾಗಿ ಬೆಂಬಲ ಬೆಲೆ ಸಿಗುತ್ತಿಲ್ಲ, ಇಂತಹ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಯೋಗ್ಯ ಪರಿಹಾರ ನೀಡಿರುವುದಿಲ್ಲ. ಇಂತಹ ಅಲ್ಪಸ್ವಲ್ಪ ಜಮೀನನ್ನು ಹುಢಾ ಕಡಿಮೆ ಬೆಲೆಯಲ್ಲಿ ರೈತರ ಜಮೀನನ್ನು ವಶಪಡಿಸಿಕೊಂಡು ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ಮುಂದಾಗಿದ್ದು ಖಂಡನೀಯ ಎಂದು ರ