ಬೆಂಗಳೂರು ಉತ್ತರ: ಕೆ.ಎನ್.ರಾಜಣ್ಣ ಮಾಡಿದ ಅಪರಾಧವೇನು,
ವಿಧಾನಸೌಧದಲ್ಲಿ ಬಿ.ವೈ ವಿಜಯೇಂದ್ರ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರು, ಅವರ ಸಂಪುಟದ ಹಿರಿಯ ಸಹೋದ್ಯೋಗಿ ಸಚಿವ ಕೆ.ಎನ್.ರಾಜಣ್ಣ ಅವರು ಸಂಪುಟದಿಂದ ವಜಾ ಮಾಡುವ ಯಾವ ಘೋರ ಅಪರಾಧ ಮಾಡಿದ್ದಾರೆ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಆಗಸ್ಟ್ 12ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರ ವಜಾ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಲ್ಲ, ಇದರ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕಿದೆ ಎಂದು ತಿಳಿಸಿದರು.ಯಾವ ಕಾರಣಕ್ಕಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಲಾಗಿದೆ ಎಂದು ಅವರು ಪ್ರಶ್ನಿಸಿದರು.