ಕಮಲಾಪುರ: ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆ.10ರಂದು ಬೃಹತ್ ಪ್ರತಿಭಟನೆಗೆ ಸಜ್ಜು: ಪಟ್ಟಣದಲ್ಲಿ ಮಾಜಿ ಸಂಸದ ಉಮೇಶ ಜಾಧವ್
ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರಾ ಸಮುದಾಯಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಮಾಜಿ ಸಂಸದ ಉಮೇಶ ಜಾಧವ್ ಆರೋಪಿಸಿದರು. ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಕಮಲಾಪುರದಲ್ಲಿ ಗುರುವಾರ 6 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.. ಬಂಜಾರರನ್ನು ಜನಗಣತಿಯಲ್ಲಿ ಕಡಿಮೆ ಎಂದು ತೋರಿಸಿ ಮೀಸಲಾತಿ ಹಂಚಿಕೆ ಮಾಡಿರುವುದು ಅನ್ಯಾಯಕರ ಕ್ರಮವಾಗಿದ್ದು, ಸರ್ಕಾರ ಹೊರಡಿಸಿರುವ ವರದಿ ಕೈಬಿಡಬೇಕೆಂದು ಆಗ್ರಹಿಸಿದರು.