ಚಾಮರಾಜನಗರ: ಬಾಬು ಜಗಜೀವನ್ ರಾಮ್ ಅವರು ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ : ನಗರದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಾಬು ಜಗಜೀವನ್ ರಾಮ್ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬಾಬು ಜಗಜೀವನ್ ರಾಮ್ ಅವರ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ತಳ ಸಮುದಾಯದ ವ್ಯಕ್ತಿಯಾಗಿ ದೇಶದ ಉನ್ನತ ಹುದ್ದೆಗೆ ಪಡೆಯಬಹುದು ಎಂದು ಸಾಧಿಸಿ ತೋರಿಸಿದರು ಎಂದು ತಿಳಿಸಿದರು.