ಹೊಳಲ್ಕೆರೆ: ಹೊಳಲ್ಕೆರೆ ತಾಲ್ಲೂಕಿನಲ್ಲಿ ಕರಡಿಗಳ ಹಾವಳಿ: ಆತಂಕದಲ್ಲಿ ಗ್ರಾಮಸ್ಥರು
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಹದೇವಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕರಡಿಗಳ ಓಡಾಟ ಹೆಚ್ಚಾಗಿದ್ದು, ಸ್ಥಳೀಯರು ಹಾಗೂ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಕರಡಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.