ಸಿರವಾರ ತಾಲೂಕಿನ ನವಲಕಲ್ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ಶನಿವಾರ 12 ಗಂಟೆಗೆ ಮಾಡಲಾಯಿತು. ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳ ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಸಂಯೋಜಕರಾದ ಬಾವಸಲಿ ಅವರು ಮಾತನಾಡಿ, ಲೈಂಗಿಕ ಹಿಂಸೆಯಿಂದ ಮಹಿಳೆಯರನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.