ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪ್ರಪ್ರಥಮ ಬಾರಿಗೆ ಯುರೋಪಿಯನ್ ಒಕ್ಕೂಟದ ಎರಾಸ್ಮಸ್ ಸಂಶೋಧನಾ ನಿಧಿಯನ್ನು ಪಡೆದಕೊಂಡಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್ ಹೇಳಿದರು. ನಗರದ ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಾಸ್ಮಸ್ ಸಂಶೋಧನಾ ನಿಧಿಯಿಂದ ಪ್ರವಾಸೋದ್ಯಮ ಸಂಬಂಧಿತ ಸಂಶೋಧನೆ ಕೈಗೊಳ್ಳಲು ಹೆಚ್ಚು ಅನುಕೂಲ