ರಾಯಚೂರು: ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ನಗರದಲ್ಲಿ ಪೊಲೀಸರಿಂದ ಪಥ ಸಂಚಲನ
ರಾಯಚೂರು ನಗರದಲ್ಲಿ ಮಂಗಳವಾರ ನಡೆಯಲಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಅಂಗವಾಗಿ ರಾಯಚೂರು ನಗರದಲ್ಲಿ ಸೋಮವಾರ ಸಾಯಂಕಾಲ ಪೊಲೀಸರಿಂದ ಪಥಸಂಚಲನ ನಗರದ ಪ್ರಮುಖ ಬೀದಿಗಳ ಮೂಲಕ ಪಥಸಂಚಲನವನ್ನು ನಡೆಸಿ ಹಿಂದೂ ಮಹಾಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗೆ ಮುಂದಾಗದಂತೆ ಸಾರ್ವಜನಿಕರಿಗೆ ಸೂಚನೆಯನ್ನು ನೀಡಲಾಗಿದೆ. ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯಿಂದ ಸಹಕರಿಸಲು ಜಾಗೃತಿಯನ್ನು ಮೂಡಿಸಲಾಗಿದೆ.