ಮಡಿಕೇರಿ: ನಗರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್
ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದ್ದು, ಆ ದಿಸೆಯಲ್ಲಿ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯ