ನವಲಗುಂದ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಇಂದು ಅವರ ಕುಟುಂಬದೊಂದಿಗೆ ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳಿ ಕಾರು ಅಪಘಾತಕ್ಕೀಡಾಗಿ, ಮಹಾಂತೇಶ್ ಬಿಳಗಿ ಹಾಗೂ ಅವರ ಇಬ್ಬರು ಸಹೋದರರು ಸಾವನ್ನಪ್ಪಿದ ಸುದ್ದಿ ತಿಳಿದು ತುಂಬಾ ದುಃಖವಾಯಿತು ಎಂದು ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದರು. ದೇವರು ಅವರು ಆತ್ಮಕ್ಕೆ ಶಾಂತಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.