ಜಗಳೂರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಜಯಂತ್ಯುತ್ಸವ ಆಚರಣೆಗಳ ಕುರಿತು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಶುಕ್ರವಾರ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್ ಮಾರ್ಚ್ 23 ರೇಣುಕಾಚಾರ್ಯ ಜಯಂತ್ಯುತ್ಸವ, ಮಾರ್ಚ್ 25ರಂದು ಶ್ರೀ ಯೋಗಿ ನಾರಾಯಣ ಯತೀಂದ್ರ ಜಯಂತ್ಯುತ್ಸವ ನಡೆಯಲಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.