ಕಂಪ್ಲಿ: ಬಳ್ಳಾರಿ: ಮೂರು ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ
Kampli, Ballari | Sep 12, 2026 ಬಳ್ಳಾರಿ ಜಿಲ್ಲೆಯ ಕಂಪ್ಲಿ ಹಾಗೂ ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಸೂಕ್ಷ್ಮ ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಂ.15 ಗೋನಾಳ, ನಂ.10 ಮುದ್ದಾಪುರ ಹಾಗೂ ಹೊನ್ನಳ್ಳಿ ಗ್ರಾಮಗಳಲ್ಲಿ ಈ ಆದೇಶ ಜಾರಿಯಲ್ಲಿದೆ.