ಮಂಡ್ಯ: ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು: ನಗರದಲ್ಲಿ ನಟ ಚೇತನ್
Mandya, Mandya | Oct 25, 2025 ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು ಎಂದು ನಟ ಚೇತನ್ ಅಭಿಪ್ರಾಯಪಟ್ಟರು. ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್, ಭೀಮ್ ಆರ್ಮಿ ಸೇರಿದಂತೆ ಎಲ್ಲರಿಗೂ ಪಥ ಸಂಚಲನ ನಡೆಸಲು ಅವಕಾಶ ಕಲ್ಪಿಸಬೇಕು ಎಂದರು. ನಮ್ಮ ವಿರೋಧಿಗಳು ಮನುವಾದಿಗಳು, ಅಸಮಾನತೆ ಪ್ರತಿಪಾದಿಸುವವರು. ಅದರ ವಿರುದ್ಧ ಹೋರಾಡುವ, ಸಂವಿಧಾನ ಎತ್ತಿ ಹಿಡಿಯುವ ಕೆಲಸವನ್ನು ಯಾವುದೇ ರಾಜಕೀಯ ಪಕ್ಷ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮಾನತವಾದಿಗಳು ಮಾತ್ರ ಸಂವಿಧಾನ ಎತ್ತಿ ಹಿಡಿಯುತ್ತಿದ್ದಾರೆ. ಸಮ ಸಮಾಜ ನಿರ್ಮಾಣ ನಮ್ಮ ಉದ್ದೇಶವಾಗಿದೆ. ರಾಜಕೀಯ ಲಾಭಕ್ಕಾಗಿ ಒಂದು ಸಂಸ್ಥೆ ನಿಷೇಧ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಪ್ರತಿಪಾದಿಸಿದರು.