1975ರಿಂದ 2025ರವರೆಗೆ ಟ್ಯಾಗೋರ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳ ಸಾನ್ನಿಧ್ಯದಲ್ಲಿ ಟ್ಯಾಗೋರ್ ಉತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 14ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಭವ್ಯವಾಗಿ ಆಯೋಜಿಸಲಾಗಿದೆ ಎಂದು ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ನೃತ್ಯ ನಿರ್ದೇಶಕ ವೀರೇಂದ್ರ ಜಲ್ದಾರ್ ಶನಿವಾರ 10 ಗಂಟೆ 30 ನಿಮಿಷಕ್ಕೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ನೃತ್ಯ ಮತ್ತು ಗಾಯನ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.