ದಾಂಡೇಲಿ: ನಗರ ಸಭೆಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಶಾಸಕ ಆರ್.ವಿ. ದೇಶಪಾಂಡೆ
ದಾಂಡೇಲಿ: ನಗರ ಸಭೆ ವತಿಯಿಂದ ದಂಡಕಾರಣ್ಯ ಇಕೋ ಪಾರ್ಕ್ ನಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಇಂದು ಗುರುವಾರ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ಆಚರಿಸಲಾಯಿತು. ಗಿಡ ನೆಟ್ಟು ಮಾತನಾಡಿದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್ ವಿ ದೇಶಪಾಂಡೆ ಅವರು ನಾನು ಚಿಕ್ಕವನಿದ್ದಾಗಿನಿಂದಲೂ ವನಮಹೋತ್ಸವ ಆಚರಣೆ ಮಾಡುವುದನ್ನು ನೋಡುತ್ತಾ ಬಂದಿದ್ದೇನೆ. ಮುಂದಿನ ಭವಿಷ್ಯಕ್ಕಾಗಿ ನಾವೆಲ್ಲರೂ ಪರಿಸರ ಸಂರಕ್ಷಣೆ ಮಾಡಬೇಕು. ಇದು ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಕೇವಲ ಅರಣ್ಯ ಇಲಾಖೆಯಿಂದ ಮಾತ್ರ ಪರಿಸರ ಸಂರಕ್ಷಣೆ ಅಸಾಧ್ಯ. ಅರಣ್ಯ ಇಲಾಖೆಯ ಜೊತೆ ಸಾರ್ವಜನಿಕರು ಕೈಜೋಡಿಸಿದಾಗ ಪರಿಸರ ಸಂರಕ್ಷಣೆ ಸಾಧ್ಯ ಎಂದರು.