ಶಹಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನಕ್ಕೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ
Shahpur, Yadgir | Sep 17, 2025 ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ಜನ್ಮ ದಿನಾಚರಣೆ ಅಂಗವಾಗಿ ಶಹಾಪುರ ತಾಲೂಕ ಬಿಜೆಪಿ ಘಟಕದಿಂದ ಬೃಹತ್ ರಕ್ತದಾನ ಶಿಬಿರದ ಮೂಲಕ ಆಚರಿಸಲಾಗಿದೆ. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಮಧ್ಯಾಹ್ನದವರೆಗೆ ನಡೆದ ರಕ್ತದಾನ ಶಿಬಿರದಲ್ಲಿ 75ಕ್ಕೂ ಹೆಚ್ಚು ಜನ ರಕ್ತದಾನವನ್ನು ಮಾಡಿದ್ದಾರೆ. ಕಾರ್ಯಕ್ರಮದ ನೇತೃತ್ವವನ್ನು ಬಿಜೆಪಿಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಅಮೀನಾ ರೆಡ್ಡಿ ಯಾಳಗಿ ವಹಿಸಿದ್ದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಯಾಳಗಿ, ಗ್ರಾಮೀಣ ಮಂಡಲ ಅಧ್ಯಕ್ಷ ತಿರುಪತಿ ಹತ್ತಿಕಟಗಿ ಸೇರಿದಂತೆ ಅನೇಕ ಮುಖಂಡರು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.