ಶ್ರೀರಂಗಪಟ್ಟಣ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಸ್ಮಶಾನ ರಸ್ತೆಯ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ಶ್ರೀರಂಗಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದ ಜನರು ಗ್ರಾಮದ ಸ್ಮಶಾನ ರಸ್ತೆಯ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದರು. ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು ಹಾಗೂ ಮುಖಂಡರು ಭಾಗಿಯಾಗಿ ಒತ್ತುವರಿ ಮಾಡಿಕೊಂಡವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ರಸ್ತೆ ಒತ್ತುವರಿಯಿಂದಾಗಿ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ಸೇರಿ ರೈತರ ಜಮೀನಿಗೆ ಹೋಗಲು ರಸ್ತೆ ಇಲ್ಲದೆ ಪರದಾಟ ಉಂಟಾಗಿದೆ. ನ್ಯಾಯ ದೊರಕದೆ ಇದ್ದರೆ ಅಹೋರಾತ್ರಿ ಹೋರಾಟ ಕೈಬಿಡುವುದಿಲ್ಲವೆಂದು ಗ್ರಾಮಸ್ಥರು ಪಟ್ಟುಹಿಡಿದರು. ರಾತ್ರಿ ಇಡೀ ತಾಲೂಕು ಕಚೇರಿ ಮುಂಭಾಗವೇ ಅಡುಗೆ ಮಾಡಿ ಊಟ ಮಾಡಿ ಧರಣಿ ಮುಂದುವರೆಸಿದರು. ಕೊರೆಯುವ ಚಳಿಯಲ್ಲಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದರೂ ಅ