ಶಿವಮೊಗ್ಗ: ಬಾಪೂಜಿ ನಗರದಲ್ಲಿ ನಡೆದಿದ್ದ ಮನೆಗಳ್ಳತನದ ಮೂವರು ಆರೋಪಿಗಳ ಬಂಧನ
ಬಾಪೂಜಿನಗರದ ಮಹಿಳೆಯೊಬ್ಬರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಮೂವರು ಆರೋಪಿಗಳನ್ನು ಕೋಟೆ ಪೊಲೀಸರು ಬಂಧಿಸಿದ್ದಾರೆ.ಜೂ.29ರಂದು ಬಾಪೂಜಿನಗರದ ಮಹಿಳೆಯ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಮಹಮದ್ ರಫೀಕ್ ಅಥಾವುಲ್ಲಾ ರೋಮನ್ ಕುರೇಶಿ ಎಂಬುವುದನ್ನು ಬಂಧಿಸಿದ್ದು ಬಂದಿತ್ತರ ಬಳಿ ಇದ್ದ 15,40,500 ರೂ ಮೌಲ್ಯದ 237 ಗ್ರಾಂ ತೂಕದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ಬುಧವಾರ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.