ಮಂಗಳೂರು: ಮಂಗಳೂರು ದಸರಾ 2026: ಅಕ್ಟೋಬರ್ 12ರಂದು ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಚಾಲನೆ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಮಂಗಳೂರು ದಸರಾ ನಡೆಯಲಿದೆ. ಅ.12ರಂದು ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದು, ಅರಮನೆ ಮಾದರಿಯ ದರ್ಬಾರ್ ಮಂಟಪದಲ್ಲಿ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ. ಶೋಭಾಯಾತ್ರೆ, ಚಂಡಿಕಾಹೋಮ ಮತ್ತು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜನೆಗೊಂಡಿವೆ.