ಶಿರಸಿ: ನಗರದ ವಿವಿಧ ಗಣೇಶ ಪೆಂಡಾಲ್ ಮತ್ತು ವಿಸರ್ಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಶಿರಸಿ : ನಗರ ವ್ಯಾಪ್ತಿಯಲ್ಲಿರುವ ವಿವಿಧ ಗಣೇಶ ಪೆಂಡಾಲ್ ಮತ್ತು ವಿಸರ್ಜನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ ಅವರು ಬುಧವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳಿಗೆ ಗಣೇಶ ಉತ್ಸವದ ಶ್ರೀ ಗಣೇಶನ ವಿಸರ್ಜನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಸರಕಾರದ ಮಾರ್ಗಸೂಚಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ,