ಚಾಮರಾಜನಗರ: ನಗರದಲ್ಲಿ ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕರಿಂದ ಚಾಲನೆ
ದೇಶಾದ್ಯಂತ ಮತಗಳ್ಳತನ ತಡೆವ ಸಂಬಂಧ ಎಐಸಿಸಿ ಆದೇಶದ ಮೇರೆಗೆ ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಾಮರಾಜನಗರ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮರಾಜನಗರ ವಿಧಾನಸಭೆ ಕ್ಷೇತ್ರದ ಬೂತ್ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ದೇಶದ ವಿವಿಧೆಡೆ ಮತಗಳ್ಳತನ ನಡೆಯುತ್ತಿದ್ದು, ಪಕ್ಷಕ್ಕೆ ನಿರೀಕ್ಷಿತ ಪ್ರಮಾಣದ ಮತಗಳು ಚಲಾವಣೆಯಾಗುತ್ತಿಲ್ಲ, ಇದನ್ನು ತಡೆಯುವ ಸಂಬಂಧ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಗಾಂಧಿ ವೋಟ್ ಚೋರಿ ಸಹಿ ಸಂಗ್ರಹ ಅಭಿಯಾನದ ಉಸ್ತುವಾರಿ ವಹಿಸಬೇಕು ಎಂದರು