ತೀರ್ಥಹಳ್ಳಿ: ಬಾಳೆಬೈಲು ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವು
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಮತ್ತು ಬೈಕ್ ನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಾಗದನೆ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಸಮೀಪದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಾಳೆ ಬಾಯಲ್ಲಿನ ರ್‌ಎಂಸಿ ಯಾರ್ಡ್ ಬಳಿ ಈ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ಸುದೀಪ್ (25)ಹಾಗೂ ಸುಧೀಶ್(30) ಮೃತ ದುರ್ದೈವಿಗಳು ಎಂದು ತಿಳಿದುಬಂದೇ ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸಿದ್ದೆ ಸಾವಿಗೆ ಕಾರಣ ಎನ್ನಲಾಗುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ